ಪ್ರೇಯಸಿಯನ್ನು ಹತ್ಯೆಗೈದು ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ದೆಹಲಿಯ ಶ್ರದ್ಧಾ ವಾಕರ್ ಮಾದರಿಯಲ್ಲೇ ಮತ್ತೊಂದು ಮೈ ನಡುಗಿಸುವ ಘಟನೆ ನಡೆದಿದೆ. ಪ್ರೇಯಸಿಯನ್ನೇ ಹತ್ಯೆ ಮಾಡಿದ ನೌಕಾಪಡೆ ಅಧಿಕಾರಿಯೊಬ್ಬರು, ಆಕೆಯ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ನೌಕಾಪಡೆಯಲ್ಲಿ ಅಧಿಕಾರಿಯಾಗಿರುವ ಆರೋಪಿಯು ತನ್ನ ಪ್ರೇಯಸಿಯೊಂದಿಗೆ ವಾಸವಾಗಿದ್ದನು. ಇತ್ತೀಚೆಗೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಆತ ಆಕೆಯನ್ನು ಹತ್ಯೆ ಮಾಡಿದ್ದಾನೆ. ಕೊಲೆಯ ನಂತರ ಯಾರಿಗೂ ಅನುಮಾನ ಬರದಂತೆ ಶವವನ್ನು ಹಲವಾರು ಭಾಗಗಳಾಗಿ ಕತ್ತರಿಸಿ ತನ್ನ ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ಶೇಖರಿಸಿಟ್ಟಿದ್ದನು.

ಇದನ್ನೂ ಓದಿ:ಪರಪ್ಪನ ಅಗ್ರಹಾರದಲ್ಲಿ ಹಾಲಿನ ಪ್ಯಾಕೆಟ್ ಒಳಗೆ ಮೊಬೈಲ್! ಡಿಜಿಪಿ ಹೆಸರೇಳಿ ವಿಡಿಯೋ ಮಾಡಿದ ಕೈದಿಗಳು!

ಸಂತ್ರಸ್ತ ಯುವತಿಯ ಫೋನ್ ಸಂಪರ್ಕಕ್ಕೆ ಸಿಗದಿದ್ದಾಗ ಆಕೆಯ ಪೋಷಕರು ಮತ್ತು ಗೆಳೆಯರು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಾ ಅಧಿಕಾರಿಯ ಮನೆಗೆ ಭೇಟಿ ನೀಡಿದಾಗ ಈ ಘೋರ ಕೃತ್ಯ ಬಯಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಪ್ರೀತಿ ಮತ್ತು ವಿಶ್ವಾಸದ ಹೆಸರಲ್ಲಿ ನಡೆದ ಈ ಕ್ರೌರ್ಯ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ