ಪುತ್ತೂರು : ವಿಟ್ಲದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನ ಧ್ವಜಾರೋಹಣ ನೆರವೇರಿಸಿದರು.
ಪ್ರಧಾನ ಕಾರ್ಯದರ್ಶಿಗಳಾದ ಅಬೂಬಕರ್ ನೋಟರಿ ವಿಟ್ಲ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಝುಬೇರ್ ವಿಟ್ಲ ಗಣರಾಜ್ಯ ಮತ್ತು ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು.

ಇದನ್ನೂ ಓದಿ : ದೀಪಕ್ ಸಾವಿನ ಪ್ರಕರಣ: ಶಿಮ್ಜಿತಾಗೆ ಜಾಮೀನು ನಿರಾಕರಣೆ
ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರಾದ ಇಕ್ಬಾಲ್ ಶೀತಲ್ ಮಸೀದಿ ಕೋಶಾಧಿಕಾರಿ ಶರೀಫ್ ಪೊನ್ನೊಟ್ಟು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಮುಖ್ಯೋಪಾಧ್ಯಾಯರಾದ ಮನಾಝಿರ್ ಮುಡಿಪು ಸ್ವಾಗತಿಸಿದರು. ಶಿಕ್ಷಕಿ ಫರ್ಝಾನ ಎಚ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

