ಬೆಂಗಳೂರ, ಫೆ.19: ಒಕ್ಕಲಿಗ ಯುವ ಬ್ರಿಗೇಡ್ 2 ದಿನಗಳ ಕಾಲ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಾವಯವ ಸಂತೆ , ಉಚಿತ ಆರೋಗ್ಯ ಶಿಬಿರ , ಸರ್ವಜನಾಂಗದ ವಧು ವರರ ಮುಖಾ ಮುಖಿ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಯವರು ಶ್ರೀ ಚಂದ್ರಶೇಖರ ಮಹಾಸ್ವಾಮೀಜಿ ಯವರ ಸಾಧನೆ ಮತ್ತು ಒಕ್ಕಲಿಗ ಯುವ ಬ್ರಿಗೇಡಿನ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿಶ್ಚಲನಂದನಾಥ ಮಹಾಸ್ವಾಮೀಜಿ ಯವರು ಮಾತನಾಡಿ , ಕಾರ್ಯಕ್ರಮದ ಉದ್ದೇಶ , ಭೈರವೈಕ್ಯ ಚಂದ್ರಶೇಖರನಾಥ ಮಹಾಸ್ವಾಮಿಯವರ ಅಪಾರ ಸಾಧನೆ ಮತ್ತು ಒಕ್ಕಲಿಗ ಯುವ ಬ್ರಿಗೇಡಿನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ರವರ ಶ್ರಮ ಮತ್ತು ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು .

ಇದನ್ನೂ ಓದಿ: ವಿಬಿ ಜಿರಾಮ್ ಜಿ: ಜೆಸಿಬಿ ಮೂಲಕ ಕೆಲಸ ಮಾಡಿ ಬಡವರ ಹಣ ಕಬಳಿಸುವುದು ಸಾಧ್ಯವಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಸಿ ಎನ್ ಮಂಜುನಾಥ್ ರವರು ಒಕ್ಕಲಿಗ ಯುವ ಬ್ರಿಗೇಡ್ ಸಮಾಜದ ಮುಖವಾಣಿಯಾಗಿ ಕೆಲಸವನ್ನು ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ತಿಳಿಸಿದರು .ಈ ಸಂದರ್ಭದಲ್ಲಿ ಯಾದವ ಮಹಾಸಂಸ್ಥಾನ ಮಠದ ಶ್ರೀ ಕೃಷ್ಣ ಯಾದವನಂದ ಮಹಾಸ್ವಾಮೀಜಿ , ಶ್ರೀ ಭಕ್ತ ಮುನೇಶ್ವರ ಮಹಾಸಂಸ್ಥಾನ ಮಠದ ಶ್ರೀ ರಂಗನಾಥ ಸ್ವಾಮಿಗಳು , ಮಹಾರಾಷ್ಟ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಡಾ. ಗೋವಿಂದರಾಜ್ ರವರು ಮತ್ತು ಅನೇಕ ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು. ಒಕ್ಕಲಿಗರ ಯುವ ಬ್ರಿಗೇಡ್ ನ ಸಂಸ್ಥಾಪಕ ಅಧ್ಯಕ್ಷರಾದ ನಂಜೇಗೌಡ ನಂಜುಂಡ ರವರ ನೇತೃತ್ವದಲ್ಲಿ ಎರಡೂ ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು .
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ

