ಬೆಂಗಳೂರು : ಗುಣಮಟ್ಟದ ಶಿಕ್ಷಣ ಎಲ್ಲ ಮಕ್ಕಳಿಗೂ ಸಿಗಬೇಕೆಂಬುದು ಸಂವಿಧಾನಾತ್ಮಕ ಹಕ್ಕು. ಆದರೆ ರಾಜ್ಯದ ಅನೇಕ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಶಿಕ್ಷಕರ ಅಭಾವ ಮತ್ತು ನಿರ್ಲಕ್ಷ್ಯದಿಂದ ಶಿಕ್ಷಣ ವ್ಯವಸ್ಥೆಯೇ ಅವ್ಯವಸ್ಥೆಯಲ್ಲಿದೆ ಎಂಬ ಆರೋಪಗಳು ಹೆಚ್ಚುತ್ತಿವೆ.
ಬಹುತೇಕ ಗ್ರಾಮೀಣ ಹಾಗೂ ಅರೆನಗರ ಪ್ರದೇಶಗಳ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಕುಳಿತುಕೊಳ್ಳಲು ಸರಿಯಾದ ಮೇಜು ಕುರ್ಚಿಗಳಿಲ್ಲದ ಪರಿಸ್ಥಿತಿ ಮುಂದುವರಿದಿದೆ. ಕೆಲವೆಡೆ ಶಿಥಿಲಗೊಂಡ ಕಟ್ಟಡಗಳು ವಿದ್ಯಾರ್ಥಿಗಳ ಜೀವಕ್ಕೂ ಅಪಾಯ ಉಂಟುಮಾಡುತ್ತಿವೆ. ಹೀಗಿರುವಾಗ ಕರ್ನಾಟಕ ಸರ್ಕಾರದ ‘ವಾಟರ್ ಬೆಲ್’ ಯೋಜನೆಯ ಬಗ್ಗೆ ಹಲವಾರು ಟೀಕೆಗಳು ಕೇಳಿ ಬರುತ್ತಿವೆ.

ವಾಟರ್ ಬೆಲ್ ಮಕ್ಕಳಿಗೆ ನಿಯಮಿತವಾಗಿ ನೀರು ಕುಡಿಯಲು ನೆನಪಿಸುವುದರಿಂದ ದೇಹದ ಚಯಾಪಚಯ ಕ್ರಿಯೆ, ಜಲಾಂಶಮಟ್ಟ ಮತ್ತು ಇತರ ಆರೋಗ್ಯ ಸಂಬಂಧಿತ ಅಂಶಗಳಲ್ಲಿ ಸುಧಾರಣೆ ತರಲು ಸಹಾಯಕವಾಗುತ್ತದೆ. ಈ ವ್ಯವಸ್ಥೆಯನ್ನು ಎಲ್‌ಕೆಜಿ ಯಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳು ನಿಯಮಿತವಾಗಿ ನೀರು ಕುಡಿಯುವಂತೆ ಪ್ರೇರೇಪಿಸಲು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ‘ವಾಟರ್ ಬೆಲ್’ (ನೀರು ಕುಡಿಯುವ ಗಂಟೆ) ವ್ಯವಸ್ಥೆ ಜಾರಿಗೊಳಿಸುವಂತೆ ಕರ್ನಾಟಕದ ಪಿಎಂ–ಪೋಷಣ್ ಯೋಜನೆಯ ನಿರ್ದೇಶಕರು ವೃತ್ತಪತ್ರಿಕೆ ಹೊರಡಿಸಿದ್ದಾರೆ. ಆದರೆ, ಈ ಆದೇಶವು ನಮ್ಮಲ್ಲಿನ ವಾಸ್ತವ ಪರಿಸ್ಥಿತಿಗೆ ವಿರುದ್ಧವಾಗಿದೆ ಎಂಬ ಟೀಕೆ ವ್ಯಕ್ತವಾಗುತ್ತಿದೆ.
ಈ ನಡುವೆ, ಸರ್ಕಾರವು ನೂತನ ಶಿಕ್ಷಣ ನೀತಿ, ಡಿಜಿಟಲ್ ತರಗತಿಗಳು, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಊಟದಂತಹ ಯೋಜನೆಗಳನ್ನು ಘೋಷಿಸಿದ್ದರೂ, ಅವುಗಳ ಪರಿಣಾಮ ಎಲ್ಲಾ ಶಾಲೆಗಳಿಗೂ ಸಮಾನವಾಗಿ ತಲುಪಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ.
ಇದನ್ನೂ ಓದಿ : Sankranthi : ಸಂಕ್ರಾಂತಿಗೆ ಮನೆಗೆ ಬಂದ ಅಳಿಯನಿಗೆ 290 ವಿಧದ ಭಕ್ಷ್ಯ ಉಣಬಡಿಸಿದ ಅತ್ತೆ
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

