ಬಂಗಾಳದಲ್ಲಿ ಬಿಜೆಪಿ ದಿಗ್ವಿಜಯ; ಸಿಎಂ ಕುರ್ಚಿಗೆ ಭಾರಿ ಪೈಪೋಟಿ! ಮಮತಾ ಬ್ಯಾನರ್ಜಿಗೆ ಭಾರೀ ಮುಖಭಂಗ

ಪಶ್ಚಿಮ ಬಂಗಾಳ: ಇಲ್ಲಿನ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ (180+ ಸ್ಥಾನಗಳು) ಸಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಹಿಳಾ ಸುರಕ್ಷತೆಯನ್ನೇ ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡು ಚುನಾವಣೆ ಎದುರಿಸಿದ ಬಿಜೆಪಿ, ಮಹಿಳಾ ಮತದಾರರನ್ನು ಸೆಳೆಯಲು ಮಹಿಳಾ ಸಿಎಂ ಅನ್ನು ನೇಮಿಸಬಹುದು ಎನ್ನಲಾಗುತ್ತಿದೆ. ದೆಹಲಿಯಲ್ಲಿ ಈಗಾಗಲೇ ಬಿಜೆಪಿ ಮಹಿಳಾ ನಾಯಕತ್ವವನ್ನು ಉತ್ತೇಜಿಸುತ್ತಿರುವುದರಿಂದ, ಬಂಗಾಳದಲ್ಲೂ ಇದು ಮರುಕಳಿಸುವ ಸಾಧ್ಯತೆಯಿದೆ.

ಸಮೀಕ್ ಭಟ್ಟಾಚಾರ್ಯ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಇವರು ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನು ಸುವೇಂದು ಅಧಿಕಾರಿ ಅವರು ಕೂಡ ಪ್ರಬಲ ಸಿಎಂ ಪೈಪೋಟಿಯಲ್ಲಿ ಇದ್ದರೆ. ದಿಲೀಪ್ ಘೋಷ್ ಮಾಜಿ ರಾಜ್ಯಾಧ್ಯಕ್ಷರಾಗಿ ಬಂಗಾಳದಲ್ಲಿ ಬಿಜೆಪಿಯ ನೆಲೆಯನ್ನು ಗಟ್ಟಿಗೊಳಿಸಿದ ಇವರ ಹೆಸರು ಕೂಡ ಮುಂಚೂಣಿಯಲ್ಲಿದೆ.

ಆರ್‌ಜಿ ಕರ್ ಸಂತ್ರಸ್ತೆಯ ತಾಯಿ ರತ್ನ ದೇವನಾಥ್ ಅವರು ಪಾನಿಹಾಟಿಯಲ್ಲಿ ಸಾಧಿಸಿರುವ ಮುನ್ನಡೆಯು ಬಿಜೆಪಿಯ ಮಹಿಳಾ ಪರ ಹೋರಾಟಕ್ಕೆ ಸಂದ ಜಯವೆಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಕೇರಳದಲ್ಲಿ ಕಾಂಗ್ರೆಸ್ ಅಬ್ಬರ; ಅಧಿಕಾರದತ್ತ ಯುಡಿಎಫ್‌ ದಾಪುಗಾಲು! 3 ಕಡೆ ಗೆಲವು ಸಾಧಿಸಿದ ಬಿಜೆಪಿ

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಗೆ ಭಾರೀ ಮುಖಭಂಗ;

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಧಿಪತಿ ಮಮತಾ ಬ್ಯಾನರ್ಜಿ ಅವರಿಗೆ ಸ್ವಕ್ಷೇತ್ರದಲ್ಲೇ ದೊಡ್ಡ ಆಘಾತ ಎದುರಾಗಿದೆ. ತಮ್ಮ ರಾಜಕೀಯ ಭದ್ರಕೋಟೆ ಎಂದೇ ಕರೆಯಲ್ಪಡುವ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸೋಲೊಪ್ಪಿಕೊಂಡಿದ್ದಾರೆ. 20ನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ ಸುವೇಂದು ಅಧಿಕಾರಿ ಅವರು 73,463 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಅವರು 58,349 ಮತಗಳನ್ನು ಗಳಿಸಿದರು. ಅಂತಿಮವಾಗಿ 15,114 ಮತಗಳ ಅಂತರದಿಂದ ಸುವೇಂದು ಅಧಿಕಾರಿ ಜಯಭೇರಿ ಬಾರಿಸಿದರು.

ಆರಂಭದ ಏಳನೇ ಸುತ್ತಿನವರೆಗೆ ಮಮತಾ ಬ್ಯಾನರ್ಜಿ ಅವರು 17,000 ಮತಗಳ ಬೃಹತ್ ಮುನ್ನಡೆ ಸಾಧಿಸಿದ್ದರು. ಆದರೆ 14ನೇ ಸುತ್ತಿನಿಂದ ಚಿತ್ರಣ ಬದಲಾಗಿ, ಅಂತರ ಕಡಿಮೆಯಾಗುತ್ತಾ ಬಂದು ಅಂತಿಮವಾಗಿ ಸೋಲಿನಲ್ಲಿ ಅಂತ್ಯವಾಯಿತು.ಸಂಜೆ ಫಲಿತಾಂಶ ಸ್ಪಷ್ಟವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸತತ ನಾಲ್ಕನೇ ಬಾರಿ ಸಿಎಂ ಆಗುವ ಕನಸು ಕಂಡಿದ್ದ ಮಮತಾ ಅವರಿಗೆ, ಭವಾನಿಪುರದ ಸೋಲು ಅವರ ರಾಜಕೀಯ ಜೀವನದ ಅತಿದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು