Breaking News

Shocking: ಸಿದ್ದಾಪುರದಲ್ಲಿ ಶಾಲಾ ಬಸ್ ಅನ್ನು ಬೆನ್ನಟ್ಟಿ ಬಂದ ಕಾಡಾನೆ, ವಿಡಿಯೋ!

ಸಿದ್ದಾಪುರ: ಸ್ಕೂಲ್ ಬಸ್ ಅನ್ನು ಒಂಟಿ ಸಲಗವೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದ್ದು , ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಭಯದಲ್ಲಿ ಕಿರುಚಾಡಿದ್ದಾರೆ.

ಮಾಲ್ದಾರೆ ಗ್ರಾಮ ಪಂಚಾಯಿತಿಗೆ ಒಳಪಡುವ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಲ್ಲಿನ ಬಿಜಿಎಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಶಾಲಾ ಬಸ್ಸಿನಲ್ಲಿ ಕರೆದುಕೊಂಡು ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಒಂಟಿ ಸಲಗ ಶಾಲಾ ವಾಹನವನ್ನು ಹಿಂಬಾಲಿಸಿ ಅಟ್ಟಿಸಿಕೊಂಡು ಬಂದ ದೃಶ್ಯವನ್ನು ಶಾಲಾ ಬಸ್ಸಿನಲ್ಲಿದ್ದ ಚಾಲಕ ಸುನಿಲ್ ರವರ ಪುತ್ರಿ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

Advertisement

ಇದನ್ನೂ ಓದಿ: ಇಡಗುಂಜಿ ಗಣಪತಿ ದೇವಸ್ಥಾನದ ಕಾಣಿಕೆ ಹಣಕ್ಕಾಗಿ ಅರ್ಚಕರ ನಡುವೆ ಕಾಳಗ! ವಿಡಿಯೋ ಇಲ್ಲಿದೆ

ಬಾಣಂಗಾಲ ಮಠ ನಡುವೆ ಇರುವ “ಇವೊಲ್ವ್ ಬ್ಯಾಕ್” ಸಂಸ್ಥೆಗೆ ಸೇರಿದ ಕಾಫಿ ತೋಟದಿಂದ ಏಕಾಏಕಿ ರಸ್ತೆಗಿಳಿದ ಕಾಡಾನೆ ಶಾಲಾ ವಾಹನವನ್ನು ಅಟ್ಟಿಸಿ ಬಂದಿದೆ.

ಘಟನೆ ನಡೆದ ಅಲ್ಪ ದೂರದಲ್ಲೇ ಸುಮಾರು 10 ಮಂದಿ ವಿದ್ಯಾರ್ಥಿಗಳು ಶಾಲಾ ವಾಹನಕ್ಕಾಗಿ ಕಾದು ಕುಳಿತ್ತಿದ್ದರು ಎನ್ನಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಆತಂಕಗೊಂಡಿರುವ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯ ನಿವಾಸಿಗಳು ಕೂಡಲೇ ಘಟನೆ ಕುರಿತು ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಆಲಿ ರವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರುವ ಅವರು ದಾಂದಲೆ ನಡೆಸಿರುವ ಕಾಡಾನೆಯನ್ನು ಕಾಡಿಗೆ ಅಟ್ಟಿಸುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

 

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು