Breaking News

T20 Worldcup: ಮಹಿಳಾ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ದೆಹಲಿ: ಮುಂಬರುವ ಮಹಿಳಾ ಟಿ-20 ವಿಶ್ವಕಪ್‌ನ ಅಧಿಕೃತ ವೇಳಾಪಟ್ಟಿಯನ್ನು ಐಸಿಸಿ ಇಂದು ಪ್ರಕಟಿಸಿದ್ದು, 2026ರ ಜೂನ್ 12 ರಿಂದ ಆರಂಭವಾಗಿ ಜುಲೈ 5, 2026 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿದೆ.

ಒಟ್ಟು 12 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಸೆಮಿಫೈನಲ್ ಹಾಗೂ ಫೈನಲ್ ಸೇರಿದ್ದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ.

Advertisement

ಇದನ್ನೂ ಓದಿ: ದಾವಣಗೆರೆ: ವೃದ್ಧ ದಂಪತಿ ಲೂಟಿ ಪ್ರಕರಣ; ನಾಲ್ಕು ತಿಂಗಳ ಬಳಿಕ ಕುಖ್ಯಾತ ಗ್ಯಾಂಗ್‌ ಸೆರೆ!

ಈ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ತಂಡ ಮೊದಲ ದಿನವೇ ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಪಂದ್ಯಾವಳಿಯು ಎರಡು ಗುಂಪುಗಳನ್ನು ಒಳಗೊಂಡಿದ್ದು, ಪ್ರತಿಯೊಂದು ಗುಂಪು ಆರು ತಂಡಗಳನ್ನು ಒಳಗೊಂಡಿದೆ. ಗುಂಪು 1 ರಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ಸ್ ಇದೆ.

 

ಗುಂಪು 2 ರಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್ (ಆತಿಥೇಯರು), ನ್ಯೂಜಿಲೆಂಡ್, ಶ್ರೀಲಂಕಾ, ಐರ್ಲೆಂಡ್ ಮತ್ತು ಸ್ಕಾಟ್ಲಂಡ್ ಸೇರಿವೆ. ಗುಂಪು ಹಂತದಿಂದ ಅಗ್ರ ಎರಡು ತಂಡಗಳು ಜೂನ್. 30 ಮತ್ತು ಜುಲೈ. 2 ರಂದು ದಿ ಓವಲ್‌ನಲ್ಲಿ ನಡೆಯಲಿರುವ ಸೆಮಿಫೈನಲ್‌ಗೆ ಮುನ್ನಡೆಯುತ್ತವೆ. ಫೈನಲ್ ಜುಲೈ. 5 ರಂದು ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಈ ಟೂರ್ನಿಯ ಮೊದಲ ಪಂದ್ಯ ಜೂನ್. 12 ರಂದು ಎಡ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್. 14 ರಂದು ಪಾಕಿಸ್ತಾನದ ವಿರುದ್ಧ ಎಡ್‌ಬಾಸ್ಟನ್‌ನಲ್ಲಿ ಆಡಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಪ್ರಾರಂಭವಾಗಲಿದೆ.

ಉಳಿದ ಗುಂಪು ಹಂತದ ಪಂದ್ಯಗಳಲ್ಲಿ ಭಾರತ ತಂಡವು ನೆದರ್ಲ್ಯಾಂಡ್ಸ್ (ಜೂನ್ 17, ಹೆಡಿಂಗ್ಲೆ), ಬಾಂಗ್ಲಾದೇಶ (ಜೂನ್ 25, ಓಲ್ಡ್ ಟ್ರಾಫರ್ಡ್) ಮತ್ತು ಆಸ್ಟ್ರೇಲಿಯಾ (ಜೂನ್ 28, ಲಾರ್ಡ್ಸ್) ತಂಡವನ್ನು ಎದುರಿಸಲಿದೆ.

ಈ ಎಲ್ಲಾ ಪಂದ್ಯಗಳು ಟೀಂ ಇಂಡಿಯಾಕ್ಕೆ ನಿರ್ಣಾಯಕವಾಗುತ್ತವೆ, ವಿಶೇಷವಾಗಿ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಯಾಗಿರುವ ಲಾರ್ಡ್ಸ್‌ನಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು