ಬೀದರ್ BRIMS ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಬೈಕ್ ನುಗ್ಗಿಸಿದ ಕಿಡಿಗೇಡಿಗಳು

ಬೀದರ್: ಜಿಲ್ಲೆಯ ಬಿಆರ್‌ಐಎಂಎಸ್‌ (BRIMS) ಬೋಧಕ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ (Emergency Ward) ಶುಕ್ರವಾರ ತಡರಾತ್ರಿ ಇಬ್ಬರು ಯುವಕರು ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ನುಗ್ಗಿಸಿದ ಘಟನೆ ನಡೆದಿದ್ದು, ಆಸ್ಪತ್ರೆಯ ರೋಗಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯುವಕರಿಬ್ಬರು ತಮಗೆ ತೀವ್ರ ತಲೆನೋವು ಇದೆ ಎಂದು ಹೇಳಿಕೊಂಡು ಆಸ್ಪತ್ರೆಗೆ ಬಂದಿದ್ದರು. ಆದರೆ, ಬೈಕ್ ಅನ್ನು ಹೊರಗಡೆಯೇ ಪಾರ್ಕ್ ಮಾಡುವ ಬದಲು, ನೇರವಾಗಿ ಆಸ್ಪತ್ರೆಯ ತುರ್ತು ನಿಗಾ ಘಟಕದ ಒಳಗಡೆಯೇ ಚಲಾಯಿಸಿಕೊಂಡು ಹೋಗಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಆಸ್ಪತ್ರೆಯ ಒಳಗೆ ಏಕಾಏಕಿ ಬೈಕ್ ಬಂದಿದ್ದರಿಂದ ಕರ್ತವ್ಯದಲ್ಲಿದ್ದ ವೈದ್ಯರು, ಸಿಬ್ಬಂದಿ ಹಾಗೂ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಭಯಭೀತರಾದರು. ಆಸ್ಪತ್ರೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಯುವಕರನ್ನು ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರೊಂದಿಗೆ ಸಹಕರಿಸಲು ನಿರಾಕರಿಸಿದಾಗ, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಸಣ್ಣಮಟ್ಟದ ಬಲಪ್ರಯೋಗ (ಲಾಠಿಪ್ರಹಾರ) ಮಾಡಿ ಇಬ್ಬರನ್ನೂ ವಶಕ್ಕೆ ಪಡೆದರು.

ಇದನ್ನೂ ಓದಿ: ಕುಟ್ಟಿಪ್ಪುರಂ ಬಳಿ ಖಾಸಗಿ ಬಸ್ ಪಲ್ಟಿ: ಒಬ್ಬ ಸಾವು, 26 ಮಂದಿಗೆ ಗಂಭೀರ ಗಾಯ

ಬಂಧಿತ ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ರೋಗಿಗಳ ಜೀವಕ್ಕೆ ಅಪಾಯ ಉಂಟುಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ